ನವದೆಹಲಿ: ಟಿ.ವಿ. ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದಾದ್ಯಂತ ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳನ್ನು ಒಗ್ಗೂಡಿಸಿ ದೆಹಲಿ ಪೊಲೀಸರಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು, ದೆಹಲಿ ಪೊಲೀಸರಿಂದ ತನಿಖೆ ಮುಗಿಯುವವರೆಗೆ ನೂಪುರ್ ಶರ್ಮಾ ಅವರಿಗೆ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಲು ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಎಲ್ಲಾ ಎಫ್ಐಆರ್‌ಗಳನ್ನು ದೆಹಲಿ ಪೊಲೀಸರ ಗುಪ್ತಚರ ಮತ್ತು ಕಾರ್ಯತಂತ್ರ ವಿಭಾಗವು (ಐಎಫ್‌ಎಸ್‌ಒ) ವಿಚಾರಣೆ ನಡೆಸಲಿದೆ ಎಂದೂ ಕೋರ್ಟ್ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.