ADVERTISEMENT

ಒಡಿಶಾ | ಗೋಮಾಂಸದ ಅಡುಗೆ: ವಿದ್ಯಾರ್ಥಿಗಳ ವಿರುದ್ಧ ಕ್ರಮ

ಪಿಟಿಐ
Published 16 ಸೆಪ್ಟೆಂಬರ್ 2024, 15:12 IST
Last Updated 16 ಸೆಪ್ಟೆಂಬರ್ 2024, 15:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆರ್ಹಾಂಪೂರ: ಒಡಿಶಾದ ಬೆರ್ಹಾಂಪೂರ ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜೊಂದರ ಏಳು ಮಂದಿ ವಿದ್ಯಾರ್ಥಿಗಳನ್ನು ಗೋಮಾಂಸದ ಅಡುಗೆ ಸಿದ್ಧಪಡಿಸಿದ ಆರೋಪದ ಅಡಿಯಲ್ಲಿ ವಿದ್ಯಾರ್ಥಿ ನಿಲಯದಿಂದ ಹೊರಹಾಕಲಾಗಿದೆ. ವಿದ್ಯಾರ್ಥಿ ನಿಲಯದಲ್ಲಿ ಗೋಮಾಂಸದ ಅಡುಗೆ ಸಿದ್ಧಪಡಿಸಲು ಅವಕಾಶ ಇಲ್ಲ ಎಂದು ಕಾಲೇಜು ಹೇಳಿದೆ.

ನಿರ್ಬಂಧಿತ ಚಟುವಟಿಕೆಯಲ್ಲಿ ಭಾಗಿಯಾದ ಕಾರಣಕ್ಕೆ ಎರಡು ವಿದ್ಯಾರ್ಥಿ ನಿಲಯಗಳ ಏಳು ಮಂದಿ ವಿದ್ಯಾರ್ಥಿಗಳನ್ನು ಅಲ್ಲಿಂದ ಹೊರಹಾಕಲಾಗಿದೆ ಎಂದು ಪರಾಲಾ ಮಹಾರಾಜ ಎಂಜಿನಿಯರಿಂಗ್ ಕಾಲೇಜಿನ ಅಧಿಕಾರಿಗಳು ತಿಳಿಸಿದ್ದಾರೆ. ಏಳು ಮಂದಿಯ ಪೈಕಿ ಒಬ್ಬನಿಗೆ ₹2,000 ದಂಡ ಕೂಡ ವಿಧಿಸಲಾಗಿದೆ.

ADVERTISEMENT

ಕಾಲೇಜಿನ ಅಧಿಕಾರಿಗಳು ತಮ್ಮ ತೀರ್ಮಾನವನ್ನು ವಿದ್ಯಾರ್ಥಿಗಳ ಪಾಲಕರಿಗೆ ತಿಳಿಸಿದ್ದಾರೆ. ಈ ವಿದ್ಯಾರ್ಥಿಗಳು ಬುಧವಾರ ತಮ್ಮ ಕೊಠಡಿಯಲ್ಲಿ ಗೋಮಾಂಸದ ಅಡುಗೆ ಮಾಡಿದ್ದರು, ಇದು ನಿಯಮಗಳ ಉಲ್ಲಂಘನೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಘಟನೆಯ ಬಗ್ಗೆ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರಿಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ನಡೆಸಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ. ತಪ್ಪು ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಬಜರಂಗದಳ ಹಾಗೂ ವಿಎಚ್‌ಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಕಾಲೇಜಿನ ಸನಿಹದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.