ಭುವನೇಶ್ವರ: ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಸುಂದರ್ಗಢ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ಅನೈತಿಕ ಸಂಬಂಧಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಪ್ರತಿ ಸ್ಪರ್ಧಿ ಗುಂಪೊಂದು ಹರಿತವಾದ ಆಯುಧಗಳ ಮೂಲಕ ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮೂವರು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ಕು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.