ADVERTISEMENT

ಒಡಿಶಾ: ಎರಡು ವಿಧಾನಸಭಾ ಕ್ಷೇತ್ರಗಳಿಂದ ಪಟ್ನಾಯಕ್‌ ಸ್ಪರ್ಧೆ

ಪಿಟಿಐ
Published 17 ಏಪ್ರಿಲ್ 2024, 14:09 IST
Last Updated 17 ಏಪ್ರಿಲ್ 2024, 14:09 IST
ನವೀನ್‌ ಪಟ್ನಾಯಕ್‌
ನವೀನ್‌ ಪಟ್ನಾಯಕ್‌   

ಭುವನೇಶ್ವರ: ಬಿಜೆಡಿ ಅಧ್ಯಕ್ಷ ಹಾಗೂ ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ವಿಧಾನಸಭಾ ಚುನಾವಣೆಯಲ್ಲಿ, ಕಾಂತಾಬಾಂಜಿ ಮತ್ತು ಹಿಂಜಿಲಿ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದ ಬಳಿಕ ಅವರು ಈ ವಿಚಾರವನ್ನು ಪ್ರಕಟಿಸಿದರು.

2019ರ ವಿಧಾನಸಭಾ ಚುನಾವಣೆಯಲ್ಲೂ ನವೀನ್‌ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ, ಎರಡರಲ್ಲೂ ಗೆದ್ದಿದ್ದರು.

ADVERTISEMENT

5ನೇ ಪಟ್ಟಿಯಲ್ಲಿ ಒಂಬತ್ತು ಮಂದಿ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.