ADVERTISEMENT

ಒಡಿಶಾ: ವಿಧಾನಸಭೆ-ಲೋಕಸಭೆ ಟಿಕೆಟ್‌ ಆಕಾಂಕ್ಷಿಗಳಿಗೆ ಕಾಂಗ್ರೆಸ್‌ನಿಂದ ವೆಬ್‌ಸೈಟ್

ಪಿಟಿಐ
Published 4 ಫೆಬ್ರುವರಿ 2024, 12:23 IST
Last Updated 4 ಫೆಬ್ರುವರಿ 2024, 12:23 IST
<div class="paragraphs"><p>ಕಾಂಗ್ರೆಸ್‌ </p></div>

ಕಾಂಗ್ರೆಸ್‌

   

ಭುವನೇಶ್ವರ: ಒಡಿಶಾದಲ್ಲಿ ಮುಂಬರುವ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ಟಿಕೆಟ್‌ಗಾಗಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಕಾಂಗ್ರೆಸ್‌ ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ.

ಒಡಿಶಾ ಎಐಸಿಸಿ ಘಟಕದ ಉಸ್ತುವಾರಿ ಅಜೋಯ್‌ ಕುಮಾರ್‌ ಅವರು ಇಂದು (ಭಾನುವಾರ) ಕಾಂಗ್ರೆಸ್‌ ಭವನದಲ್ಲಿ ‘pragaman.in’ ವೆಬ್‌ಸೈಟ್ ಅನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ರಾಜ್ಯಾಧ್ಯಕ್ಷ ಪ್ರಸಾದ್‌ ಹರಿಚಂದನ್‌ ಹಾಗೂ ಪಕ್ಷದ ಇತರ ಹಿರಿಯ ನಾಯಕರು ಇದ್ದರು.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅಜೋಯ್‌, ‘ಬಿಜೆಪಿ ಸರ್ಕಾರ ಅಭಿವೃದ್ಧಿಪಡಿಸಿದ ಚಾಲ್ತಿಯಲ್ಲಿರುವ ವ್ಯವಸ್ಥೆಯಲ್ಲಿ ಪ್ರಭಾವಿ ವ್ಯಕ್ತಿಗಳು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಆದರೆ, ದೇಶದ ಸಾಮಾನ್ಯ ಜನರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಹಾಗಾಗಿ ಸಮಾಜಕ್ಕಾಗಿ ಕೆಲಸ ಮಾಡಬಯಸುವ ಒಳ್ಳೆಯ ಜನರು ರಾಜಕೀಯಕ್ಕೆ ಸೇರಲು ಕಾಂಗ್ರೆಸ್ ವೆಬ್‌ಸೈಟ್ ಆರಂಭಿಸಿದೆ ಎಂದು ಹೇಳಿದರು.

‘ವೆಬ್‌ಸೈಟ್ ಮೂಲಕ ಟಿಕೆಟ್‌ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲ. ನಿಮ್ಮ ಬಳಿ ಹಣವಿದೆಯೋ, ಇಲ್ಲವೋ ಎಂಬುದು ಮುಖ್ಯವಲ್ಲ. ನೀವು ಪುರುಷ ಅಥವಾ ಮಹಿಳೆ ಯಾರೇ ಆಗಿರಲಿ, ಯಾವ ಜಾತಿ ಮತ್ತು ಧರ್ಮಕ್ಕೆ ಸೇರಿದವರಾಗಿರಲಿ ಎಲ್ಲರನ್ನೂ ಸಮಾನವಾಗಿ ನೋಡಲಾಗುತ್ತದೆ. ಈ ಉದ್ದೇಶಕ್ಕಾಗಿ ಪಾರದರ್ಶಕ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಚುನಾವಣೆ ಎದುರಿಸಲು ಕಾಂಗ್ರೆಸ್ ಟಿಕೆಟ್‌ನಲ್ಲಿ ಆಸಕ್ತಿ ಹೊಂದಿರುವ ಯಾರಾದರೂ ಫೆಬ್ರುವರಿ 4 ರಿಂದ ಫೆಬ್ರುವರಿ 11ರ ನಡುವೆ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಲಿ ಶಾಸಕರು ಮತ್ತು ಸಂಸದರು ಸಹ ಪಕ್ಷದ ಟಿಕೆಟ್‌ಗಾಗಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.