ನವದೆಹಲಿ: ಒಡಿಶಾದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತ್ತು ನೇತಾರರು ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಗಣರಾಜ್ಯೋತ್ಸವದ ವೇದಿಕೆಯನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.
ಆದರೆ ಗಣರಾಜ್ಯೋತ್ಸವ ಆಚರಣೆ ಮತ್ತು ಸಾಂಸ್ಕೃತಿಕ ಸಭೆ, ಕಾರ್ಯಕ್ರಮ ನಡೆಸಲು ಆಯೋಗ ಯಾವುದೇ ನಿರ್ಬಂಧ ವಿಧಿಸಿಲ್ಲ.
ಅಲ್ಲದೆ, ನಾಯಕರು ಮತ್ತು ಸಂಪುಟ ಸಚಿವರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಕೂಡ ನಿರ್ಬಂಧವಿರುವುದಿಲ್ಲ.
ಉಳಿದಂತೆ ರಾಜಕೀಯ ಉದ್ದೇಶಕ್ಕೆ ಮತ್ತು ಚುನಾವಣೆಯ ಪ್ರಚಾರ ಕಾರ್ಯಕ್ಕೆ ಗಣರಾಜ್ಯೋತ್ಸವವನ್ನು ಬಳಸಿಕೊಳ್ಳುವಂತಿಲ್ಲ ಎಂಬ ನಿರ್ದೇಶನವನ್ನು ಆಯೋಗ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.