ADVERTISEMENT

ಒಡಿಶಾ | ಮುಖ್ಯಮಂತ್ರಿಯಾಗಿ ಮಾಝಿ ಇಂದು ಸಂಜೆ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಭಾಗಿ

ಪಿಟಿಐ
Published 12 ಜೂನ್ 2024, 3:06 IST
Last Updated 12 ಜೂನ್ 2024, 3:06 IST
<div class="paragraphs"><p>ಮಾಝಿ</p></div>

ಮಾಝಿ

   

ಭುವನೇಶ್ವರ: ಬುಡಕಟ್ಟು ಜನಾಂಗದ ನಾಯಕ ಮೋಹನ್‌ ಚರಣ್ ಮಾಝಿ ಇಂದು ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. 

ಒಡಿಶಾದಲ್ಲಿ ಬಿಜೆಪಿ ಸರಳ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ನೂತನ ಸರ್ಕಾರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆ. ಈ ಸ್ಥಾನಕ್ಕಾಗಿ ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಅವರನ್ನು ಬಿಜೆಪಿಯ ಕೇಂದ್ರ ನಾಯಕತ್ವವು ಆಯ್ಕೆ ಮಾಡಿದೆ. 

ADVERTISEMENT

‘ಪಕ್ಷದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಆಯ್ಕೆ ಅವಿರೋಧವಾಗಿ ನಡೆಯಿತು’ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಇಲ್ಲಿ ಪ್ರಕಟಿಸಿದರು.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಹಾಗೂ ಭೂಪೇಂದರ್ ಯಾದವ್‌ ಅವರು ವೀಕ್ಷಕರಾಗಿ ಆಗಮಿಸಿದ್ದರು. ಶಾಸಕಾಂಗ ಪಕ್ಷದ ಸಭೆಯಲ್ಲಿ 52 ವರ್ಷದ ಮಾಝಿ ಅವರನ್ನು ಆಯ್ಕೆ ಮಾಡಲಾಯಿತು. ಮಾಝಿ ಅವರು ಕಿಯೊನಿಹರ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದು, ಬಿಜೆಡಿ ಪಕ್ಷದ ಮಿನಾ ಮಾಝಿ ಅವರ ವಿರುದ್ಧ 11,577 ಮತಗಳ ಅಂತರದಿಂದ ಜಯಗಳಿಸಿದ್ದರು.

ಪ್ರಮಾಣವಚನ...

ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭ ಇಲ್ಲಿನ ಜನತಾ ಮೈದಾನದಲ್ಲಿ ಬುಧವಾರ ಸಂಜೆ 5 ಗಂಟೆ ನಡೆಯಲಿದೆ. ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಅವರು ಭಾಗವಹಿಸಲಿದ್ದಾರೆ. 

ಭುವನೇಶ್ವರಕ್ಕೆ ಮಧ್ಯಾಹ್ನ 2 ಗಂಟೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ.

147 ಸದಸ್ಯ ಬಲದ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳಿಸಿ ಸ್ಪಷ್ಟ ಬಹುಮತ ಪಡೆದರೆ, ಅಧಿಕಾರ ಕಳೆದುಕೊಂಡ ಬಿಜೆಡಿ 51 ಸ್ಥಾನಗಳಿಸಲಷ್ಟೇ  ಶಕ್ತವಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.