ಭುವನೇಶ್ವರ: ನಿರ್ಮಾಣ ಹಂತದ ಮೋರಿ ಕುಸಿದು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಒಡಿಶಾದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಯಾಣಸಿಂಗ್ಪುರ ಬ್ಲಾಕ್ನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೋರಿಯ ಕೆಳಗೆ ಶೇಖರಣೆಯಾಗಿದ್ದ ಮಳೆ ನೀರಿನಲ್ಲಿ ಮಕ್ಕಳು ಸ್ನಾನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಸಾಧ್ಯತೆ ಇದೆ. ಹಾಗಾಗಿ ರಕ್ಷಣಾ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.