ಬಾಲಸೋರ್‌ಗೆ ಭೇಟಿ ನೀಡಲಿರುವ ಮಮತಾ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಕ್ಕದ ಒಡಿಶಾದ ಬಾಲಸೋರ್‌ಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಆಂಧ್ರದಿಂದ ಉನ್ನತ ಮಟ್ಟದ ಸಮಿತಿ
ಒಡಿಶಾ ತ್ರಿವಳಿ ರೈಲು ಅಪಘಾತ ಸ್ಥಳದಲ್ಲಿನ ಪರಿಹಾರ ಕಾರ್ಯಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರು ಐಟಿ ಸಚಿವ ಜಿ.ಅಮರನಾಥ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ.
ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅರುಣ್ ಕುಮಾರ್ ನೇತೃತ್ವದ ಐಎಎಸ್ ಅಧಿಕಾರಿಗಳ ತಂಡ ಈಗಾಗಲೇ ಒಡಿಶಾಗೆ ತೆರಳಿದೆ
ಬೆಂಗಳೂರು–ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲಿನ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಕಾರ್ಯಾಚರಣೆ ಭರದಿಂದ ಸಾಗಿದೆ. ಆಂಧ್ರ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ರಕ್ಷಣಾ ತಂಡಗಳನ್ನು ಸ್ಥಳಕ್ಕೆ ರವಾನಿಸಿವೆ.
ಪ್ರಧಾನಿಯಿಂದ ಉನ್ನತ ಮಟ್ಟದ ಸಭೆ
ಒಡಿಶಾ ರೈಲು ದುರಂತದ ಹಿನ್ನೆಲೆಯಲ್ಲಿ ಮುಂಬೈ ಗೋವಾ ವಂದೇ ಭಾರತ್ ರೈಲು ಉದ್ಘಾಟನೆಯನ್ನು ರದ್ದುಗೊಳಿಸಲಾಗಿದೆ.
ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.
ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಬಳಿಕ ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವನ್ನು ಒದಗಿಸಲು ಸೂಚನೆ ನೀಡಿದ್ದಾರೆ.
ಸಂತೋಷ್ ಲಾಡ್ ಅವರ ಜತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಹೊರಟಿದೆ
ಬಾಲೆಹೊಸೂರ್ ತ್ರಿವಳಿ ರೈಲು ಅಪಘಾತದಿಂದಾಗಿ ಈ ಮಾರ್ಗದಲ್ಲಿ ಸಂಚರಿಸುತ್ತಿರುವ ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ಶುಕ್ರವಾರ (ಜೂನ್ 2) ಹೊರಟಿರುವ ನಾಲ್ಕು ರೈಲುಗಳ ಮಾರ್ಗ ಬದಲಾವಣೆಯ ಮಾಹಿತಿ ಇಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.