ಗುವಾಹಟಿ: ‘ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್‌ಆರ್‌ಸಿ) ಅಂತಿಮ ಪಟ್ಟಿ ಇದೇ 31ರಂದು ಪ್ರಕಟವಾಗಲಿದ್ದು, ಇದು ದೋಷರಹಿತವಾಗಿರುವಂತೆ ನೋಡಿಕೊಳ್ಳುವ ಸಲುವಾಗಿ ಎಲ್ಲಾ ಅಧಿಕಾರಿಗಳೂ ಸತತ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಎನ್‌ಆರ್‌ಸಿ ಅಧಿಕೃತ ಮೂಲಗಳು ತಿಳಿಸಿವೆ.
ಮಾಹಿತಿ ಸಂಗ್ರಹ ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಎನ್‌ಆರ್‌ಸಿ ಅಧಿಕಾರಿಗಳು ಮತ್ತೊಮ್ಮೆ ಪರಿಶೀಲನೆ ನಡೆಸುತ್ತಿದ್ದಾರೆ.
‘ಯಾವುದೇ ವ್ಯಕ್ತಿಗಳ ವಿರುದ್ಧ ಪ್ರಕರಣ ಬಾಕಿ ಇದ್ದರೆ ಅವರನ್ನು ಪಟ್ಟಿಯಿಂದ ಹೊರಗಿಡುವ ಸಲುವಾಗಿ, ಸಂಬಂಧಪಟ್ಟ ಇಲಾಖೆಗಳು ಹಾಗೂ ವಿದೇಶಿ ನ್ಯಾಯಾಧಿಕರಣಗಳ ಜತೆಗೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.
‘ಎನ್‌ಆರ್‌ಸಿ ವೆಬ್‌ಸೈಟ್‌ನಲ್ಲಿ ತಮ್ಮ ಅರ್ಜಿಯ ಸಂಖ್ಯೆ (ಎಆರ್‌ಎನ್) ನಮೂದಿಸುವ ಮೂಲಕ ಜನರು ತಮ್ಮ ಹೆಸರು ಇರುವ ಕುರಿತು ಪರಿಶೀಲಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.