ನವದೆಹಲಿ: ಕಳೆದ ಐದು ದಿನಗಳಿಂದ ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‌ಗೆ ಐವಿ ಮೂಲಕ ದ್ರವಾಹಾರವನ್ನು ನೀಡಲಾಗುತ್ತಿದೆ. ವೈದ್ಯರು ಮಲಿಕ್ ಆರೋಗ್ಯವನ್ನು ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.
ರುಬಿಯಾಸಯೀದ್ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಿಕ್, ಜಮ್ಮುವಿನ ನ್ಯಾಯಾಲಯಕ್ಕೆ ಸ್ವತಃ ಹಾಜರಾಗಲು ಅನುಮತಿ ನೀಡಬೇಕು ಎಂದು ಶುಕ್ರವಾರ ಬೆಳಿಗ್ಗಿನಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮಲಿಕ್ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಆದರೆ, ಕೇಂದ್ರವು ಅರ್ಜಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಏಕಾಂತ ವಾಸದ ಶಿಕ್ಷೆ ಅನುಭವಿಸುತ್ತಿರುವ ಮಲಿಕ್‌ನನ್ನು ಸದ್ಯ ಕೈದಿಗಳ ವೈದ್ಯಕೀಯ ತಪಾಸಣಾ ಕೊಠಡಿಯಲ್ಲಿ ಇರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.