ಕೊಹಿಮಾ: ನಾಗಾಲ್ಯಾಂಡ್‌ನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಪ್ರವಾಹ ಸ್ಥಿತಿ ಉಂಟಾಗಿದೆ. ಮಳೆಯಿಂದಾಗಿ ಒಬ್ಬರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಚುಮೌಕೆದಿಮಾ ಜಿಲ್ಲೆಯ ಹಲವು ಮನೆಗಳಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ–29ರ ಬಾಗಷಃ ಭಾಗಕ್ಕೆ ಹಾನಿಯಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಜಿಲ್ಲಾಡಳಿತ ನಾಪತ್ತೆಯಾದವರ ಶೋಧ ಕಾರ್ಯ ನಡೆಸುತ್ತಿದ್ದು, ರಾಜಧಾನಿ ಕೊಹಿಮಾಗೆ ತಲುಪುವ ಹೆದ್ದಾರಿ ಸಂಪೂರ್ಣ ಕೊಚ್ಚಿಹೋಗಿದೆ.
ಈ ಕುರಿತು ನ್ಯಾಗಲ್ಯಾಂಡ್ ಮುಖ್ಯಮಂತ್ರಿ ನಿಫಿಯು ರಿಯೊ, ‘ನಿರಂತರ ಮಳೆಯಿಂದಾಗಿ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿರುವುದರಿಂದ ತೀವ್ರ ಕಳವಳ ಉಂಟಾಗಿದೆ. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿದ್ದಾರೆ. ಕೇಂದ್ರದಿಂದ ನೆರವು ನೀಡುವಂತೆ ರಾಜ್ಯ ಸರ್ಕಾರ ಕೋರಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.