ಪಾಟ್ನಾ: ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಬಿದ್ದಿದೆ. ಅವಘಡದಲ್ಲಿ ಓರ್ವ ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
'ಇನ್ನೂ 30 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. ಕಾರ್ಮಿಕರನ್ನು ಹೊರತರುವ ಕಾರ್ಯ ನಡೆಯುತ್ತಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸ್ಥಳೀಯರ ನೆರವು ಪಡೆಯಲಾಗುತ್ತಿದೆ.
ವರದಿಗಳ ಪ್ರಕಾರ ಕೋಸಿ ನದಿಗೆ ₹ 984 ಕೋಟಿ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2014ರ ಫೆಬ್ರುವರಿಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶಿಲಾನ್ಯಾಸ ನೆರವೇರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.