ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಿಮೆಂಟ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೌಡಾ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಜುಲ್ಲಾರ್ ನಿವಾಸಿ ನಂದಕಿಶೋರ್ ರಾಮಕೃಷ್ಣ ಕರಂಡೆ (40) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 9 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರ್ಖಾನೆ ಘಟಕದ ಬಳಿ ಇರುವ 6 ಮನೆಗಳಿಗೆ ಹಾನಿಯಾಗಿದ್ದು, ಈ ವೇಳೆ ಮೂರು ಮೇಕೆಗಳು ಮೃತಪಟ್ಟಿವೆ. ಘಟನೆಗೆ ಕಾರಣವನ್ನು ಪತ್ತೆ ಹಚ್ಚಲು ವಿಧಿ ವಿಜ್ಞಾನ ತಂಡದವರು ಮತ್ತು ಕೈಗಾರಿಕ ತಜ್ಞರ ತಂಡವು ಸ್ಥಳಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶ್ರೀಜಿ ಬ್ಲಾಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಮೃತರ ಕುಟುಂಬಕ್ಕೆ ₹30 ಲಕ್ಷ ಪರಿಹಾರವನ್ನು ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.