ADVERTISEMENT

ಜಮ್ಮು: ಉಧಮ್‌ಪುರ್ ನ್ಯಾಯಾಲಯದ ಹೊರಗಡೆ ಸ್ಫೋಟ, ಓರ್ವ ಸಾವು, 7 ಮಂದಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮಾರ್ಚ್ 2022, 11:09 IST
Last Updated 9 ಮಾರ್ಚ್ 2022, 11:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ್ ಪಟ್ಟಣದ ನ್ಯಾಯಾಲಯದ ಸಂಕೀರ್ಣದ ಹೊರಗಡೆ ನಡೆದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮಧ್ಯಾಹ್ನ 1.50ರ ಸುಮಾರಿಗೆ ನಡೆದ ಸ್ಫೋಟದಲ್ಲಿ ನಾಗರಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟರು. ಗಾಯಾಳುಗಳನ್ನು ಉಧಂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ’ ಎಂದು ಪೊಲೀಸರು ಹೇಳಿದರು.

ಘಟನೆಯ ನಂತರ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಮ್ಮು ಎಡಿಜಿಪಿ ಮುಖೇಶ್‌ ಸಿಂಗ್‌ ‘ಉಧಂಪುರದ ಘಟನೆಯು ಸುಧಾರಿತ ಸ್ಫೋಟಕ ಸಾಮಗ್ರಿ (ಐಇಡಿ) ಸ್ಪೋಟ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಲ್ಲ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.