ADVERTISEMENT

ಜಂತರ್ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಮತ್ತೊಬ್ಬ ಬಂಧನ

ಪಿಟಿಐ
Published 25 ಆಗಸ್ಟ್ 2021, 9:47 IST
Last Updated 25 ಆಗಸ್ಟ್ 2021, 9:47 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ)
ಸಾಂದರ್ಭಿಕ ಚಿತ್ರ (ಎಎಫ್‌ಪಿ)   

ನವದೆಹಲಿ: ಜಂತರ್ ಮಂತರ್‌ನಲ್ಲಿ ಆಗಸ್ಟ್ 8ರಂದು ನಡೆದ ಪ್ರತಿಭಟನೆಯ ವೇಳೆ ಮುಸ್ಲಿಂ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಆರೋಪಿಯನ್ನು ಉತ್ತಮ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ಗಾಜಿಯಾಬಾದ್‌ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘೋಷಣೆ ಕೂಗಿದವರಲ್ಲಿ ಉತ್ತಮ್ ಪ್ರಮುಖ ಎಂದು ಪೊಲೀಸರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ವಿಡಿಯೊಗಳಲ್ಲಿ ಉತ್ತಮ್ ಘೋಷಣೆ ಕೂಗುತ್ತಿರುವುದು ಕಂಡುಬಂದಿತ್ತು.

ಪ್ರಕರಣಕ್ಕೆ ಸಂಬಂಧಿಸಿ ವಕೀಲ ಮತ್ತು ಬಿಜೆಪಿಯ ಮಾಜಿ ವಕ್ತಾರ ಅಶ್ವಿನಿ ಉಪಾಧ್ಯಾಯ್ ಸೇರಿದಂತೆ 7 ಮಂದಿಯನ್ನು ಈ ಹಿಂದೆಯೇ ಬಂಧಿಸಲಾಗಿತ್ತು.

ಆಗಸ್ಟ್ 8ರಂದು ‘ಭಾರತ್ ಜೋಡೋ ಆಂದೋಲನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ವೇಳೆ ಘೋಷಣೆ ಕೂಗಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.