ಮುಂಬೈ: ಎನ್ಸಿಪಿ(ಅಜಿತ್ ಬಣ) ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಬುಧವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಮಾಜಿ ಸಚಿವರೂ ಆಗಿದ್ದ ಬಾಬಾ ಸಿದ್ದೀಕಿ ಅವರನ್ನು ಮುಂಬೈನ ಬಾಂದ್ರಾದಲ್ಲಿ ಅ.12ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಸಿದ್ದೀಕಿ ಹತ್ಯೆಯ ಹಿಂದೆ, ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಹೋದರ ಅನ್ಮೋಲ್ ಬಿಷ್ಣೋಯಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.