ADVERTISEMENT

ಎನ್‌ಆರ್‌ಸಿ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ಒತ್ತಾಯ

ಪಿಟಿಐ
Published 9 ಆಗಸ್ಟ್ 2018, 16:53 IST
Last Updated 9 ಆಗಸ್ಟ್ 2018, 16:53 IST

ನವದೆಹಲಿ: ‘ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪಟ್ಟಿಯಿಂದ ಯಾವೊಬ್ಬ ಭಾರತೀಯ ಪ್ರಜೆಯನ್ನೂ ಕೈಬಿಡದಂತೆ ನೋಡಿಕೊಳ್ಳಬೇಕು’ ಎಂದು ವಿರೋಧ‍ಪಕ್ಷಗಳ ನಿಯೋಗ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಆಗ್ರಹಿಸಿದೆ.

ಕಾಂಗ್ರೆಸ್‌, ಟಿಎಂಸಿ ಹಾಗೂ ಎಡಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗ ರಾಷ್ಟ್ರಪತಿ ಅವರಿಗೆ ಈ ಸಂಬಂಧ ಗುರುವಾರ ಮನವಿ ಸಲ್ಲಿಸಿತು.

‘ದೇಶ ಪಾಲಿಸಿಕೊಂಡು ಬರುತ್ತಿರುವ ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಮೌಲ್ಯಗಳನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ. ಎನ್‌ಆರ್‌ಸಿಯಿಂದಾಗಿ 40 ಲಕ್ಷ ಭಾರತೀಯರನ್ನು ಹೊರಹಾಕುವ ಪರಿಸ್ಥಿತಿ ಬಂದೊದಗಿದೆ’ ಎಂದು ನಿಯೋಗ ಮನವಿಪತ್ರದಲ್ಲಿ ಟೀಕಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.