ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸದನ ಸಮಿತಿಯ ಅಧಿಕಾರದ ಅವಧಿಯನ್ನು ವಿಸ್ತರಿಸಬೇಕು ಎಂದು ವಿರೋಧ ಪಕ್ಷಗಳು ಸೋಮವಾರ ಆಗ್ರಹಿಸಿವೆ.
ಈ ಮಸೂದೆಯ ಬಗ್ಗೆ ಪ್ರಮುಖ ಚರ್ಚೆಗೆ ಅವಕಾಶ ಮಾಡಿಕೊಡಲು ಅವಧಿ ವಿಸ್ತರಿಸಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಿವೆ.
ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಕಾರ್ಯನಿರ್ವಹಣೆಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿವೆ.
‘ಸಮಿತಿಯ ಅಧ್ಯಕ್ಷರು ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸುವುದಿಲ್ಲ. ಸಂಸತ್‌ಗೆ ವರದಿ ಸಲ್ಲಿಸುವ ಅವಸರದಲ್ಲಿದ್ದಾರೆ. ನಿರ್ಣಾಯಕ ವಿಷಯದ ವಿಚಾರಣೆಯನ್ನು ಬುಡಮೇಲು ಮಾಡಿದ್ದಾರೆ ಎಂದು ಸ್ಪೀಕರ್‌ಗೆ ಮನವಿ ಸಲ್ಲಿಸಲಾಗಿದೆ’ ಎಂದು ಓಂ ಬಿರ್ಲಾ ಭೇಟಿಯ ಬಳಿಕ ಡಿಎಂಕೆ ಸಂಸದ ಎ. ರಾಜಾ ವರದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್‌ನ ಸಯ್ಯದ್ ನಾಸೀರ್ ಹುಸೇನ್, ಮೊಹಮ್ಮದ್ ಜಾವೇದ್, ಇಮ್ರಾನ್ ಮಸೂದ್, ತೃಣಮೂಲ ಕಾಂಗ್ರೆಸ್‌ನ ಕಲ್ಯಾಣ್ ಬ್ಯಾನರ್ಜಿ, ಎಂ. ನದಿಮುಲ್ ಹಕ್, ಎಎಪಿಯ ಸಂಜಯ್ ಸಿಂಗ್, ಸಮಾಜವಾದಿ ಪಕ್ಷದ ಮೊಹಿಬುಲ್ಲಾ, ಎಐಎಂಐಎಂನ ಅಸಾದುದ್ದೀನ್ ಓವೈಸಿ ಹಾಗೂ ಡಿಎಂಕೆ ಮುಖಂಡ ಎಂ. ಅಬ್ದುಲ್ಲಾ ಅವರು ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ ವಿಪಕ್ಷಗಳ ಸದಸ್ಯರ ನಿಯೋಗದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.