ADVERTISEMENT

3ನೇ ಅವಧಿಗೆ ಕಾಂಗ್ರೆಸ್ಸೇತರ ಪ್ರಧಾನಿ: ವಿಪಕ್ಷಗಳಿಗೆ ಅಸಮಾಧಾನ ಎಂದ ಮೋದಿ

ಪಿಟಿಐ
Published 2 ಜುಲೈ 2024, 6:22 IST
Last Updated 2 ಜುಲೈ 2024, 6:22 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಮೊದಲ ಬಾರಿಗೆ ಕಾಂಗ್ರೆಸ್ಸೇತರ ನಾಯಕರೊಬ್ಬರು ಮೂರನೇ ಅವಧಿಗೆ ಪ್ರಧಾನಿಯಾಗಿರುವುದು ಪ್ರತಿಪಕ್ಷಗಳ ನಿರಾಶೆ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಸದಸ್ಯರೊಂದಿಗೆ ಸದನದಲ್ಲಿ ನಡೆದುಕೊಳ್ಳುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಸದಸ್ಯರು ಸಂಸದೀಯ ನಿಯಮಗಳನ್ನು ಅನುಸರಿಸಬೇಕು. ಹಿರಿಯ ಸದಸ್ಯರ ಅನುಭವವನ್ನು ಪಡೆದುಕೊಳ್ಳಬೇಕು ಎಂದು ತಿಳಿರುವುದಾಗಿ ಮೂಲಗಳು ತಿಳಿಸಿವೆ.

ಮಾಧ್ಯಮಗಳ ಮುಂದೆ ಯಾವುದೇ ವಿಷಯಗಳ ಬಗ್ಗೆ ಹೇಳಿಕೆ ನೀಡುವ ಮೊದಲು ಆ ವಿಷಯಗಳ ಮಾಹಿತಿ ತಿಳಿದುಕೊಳ್ಳಬೇಕು. ತಮ್ಮ ಕ್ಷೇತ್ರಗಳ ಜನರೊಂದಿಗೆ ಸದಾ ಸಂಪರ್ಕದಲ್ಲಿ ಇರುವ ಮೂಲಕ ಮತದಾರರು ನೀಡಿದ ಬೆಂಬಲಕ್ಕೆ ಅವರಿಗೆ ಧನ್ಯವಾದ ಸಲ್ಲಿಸುವಂತೆ ಮೋದಿ ಸಲಹೆ ನೀಡಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಂಸದರಿಗೆ ಸಂಸತ್ತಿನ ವಿಷಯಗಳ ಕುರಿತು ಅಧ್ಯಯನ ಮಾಡಲು, ನಿಯಮಿತವಾಗಿ ಸಂಸತ್ತಿಗೆ ಹಾಜರಾಗಲು ಮತ್ತು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿಯಾಗಿ ಪ್ರಸ್ತಾಪಿಸುವಂತೆ ಮೋದಿ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವುದಕ್ಕೆ ಎನ್‌ಡಿಎ ಸದಸ್ಯರಿಗೆ ಮೋದಿ ಅಭಿನಂದಿಸಿದ್ದಾರೆ ಎಂದು ರಿಜಿಜು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.