ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಡೋಡಾದಲ್ಲಿ ನಾಲ್ವರು ಸೈನಿಕರು ಹುತಾತ್ಮರಾದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
ನಿರಂತರ ಭದ್ರತಾ ಲೋಪಗಳಿಗೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಮತ್ತು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿ, ಇಂಥ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದು ತೀವ್ರ ದುಃಖ ಮತ್ತು ಆಘಾತವನ್ನು ಉಂಟುಮಾಡಿದೆ ಎಂದು ಹೇಳಿದ್ದಾರೆ.
‘ನಿರಂತರ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದ ಕೆಟ್ಟ ಸ್ಥಿತಿಯನ್ನು ನಮ್ಮು ಮುಂದಿಟ್ಟಿವೆ. ಬಿಜೆಪಿಯ ತಪ್ಪು ನೀತಿಗಳಿಂದಾಗಿ ನಮ್ಮ ಯೋಧರು ಮತ್ತು ಅವರ ಕುಟುಂಬಸ್ಥರು ಈ ದುಃಸ್ಥಿತಿಯನ್ನು ಅನುಭವಿಸುತ್ತಿದ್ದಾರೆ’ ಎಂದು ‘ಎಕ್ಸ್’ ಮೂಲಕ ಕಿಡಿಕಾರಿದ್ದಾರೆ.
‘ಇಂಥ ದುಃಖದ ಸಂದರ್ಭದಲ್ಲಿ ಇಡೀ ದೇಶವೇ ಭಯೋತ್ಪಾದನೆ ವಿರುದ್ಧವಾಗಿ ನಿಂತಿದೆ’ ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 36 ದಿನಗಳಿಂದ ಪದೇ ಪದೇ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು, ನಮ್ಮ ಭದ್ರತಾ ತಂತ್ರಗಾರಿಕೆಯಲ್ಲಿ ಬದಲಾವಣೆ ತರುವ ಅಗತ್ಯವಿದೆ. ಆದರೆ ಮೋದಿ ಸರ್ಕಾರವು ಎಲ್ಲವನ್ನೂ ವ್ಯಾವಹಾರಿಕವಾಗಿಯೇ ನೋಡುತ್ತದೆಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ
ಕಳೆದ 78 ದಿನಗಳಲ್ಲಿ ಜಮ್ಮುವಿನಲ್ಲಿ ಮಾತ್ರವೇ 11 ಉಗ್ರ ದಾಳಿಗಳು ನಡೆದಿವೆ. ಈ ಸಂದರ್ಭದಲ್ಲಿ, ‘ಮನುಷ್ಯಾತೀತರಾದ ಪ್ರಧಾನಿ’ ಮತ್ತು ಸ್ವಯಂಘೋಷಿತ ಚಾಣಕ್ಯ ಅವರ ದೊಡ್ಡ ದೊಡ್ಡ ಹೇಳಿಕೆಗಳು ಏನಾದವು ಎಂದು ಕೇಳಲೇಬೇಕುಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ನಾಲ್ವರು ಯೋಧರು ಹುತಾತ್ಮರಾದ ವಿಷಯ ತಿಳಿದು ತೀವ್ರ ನೋವುಂಟಾಗಿದೆ. ವೀರ ಯೋಧರು ಮತ್ತು ಅವರ ಕುಟುಂಬಸ್ಥರ ತ್ಯಾಗಕ್ಕೆ ನಾವು ಎಂದಿಗೂ ಚಿರಋಣಿಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.