ಡೆಹ್ರಾಡೂನ್: ಕುಂಭ ಮೇಳ ಉತ್ಸವದಲ್ಲಿ ಪಾಲ್ಗೊಂಡಿದ್ದ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಷಾಂತರ ಜನರು ಮಾಸ್ಕ್ ಧರಿಸದೆ, ಅಂತರವಿಲ್ಲದೆ, ಒಟ್ಟಿಗೆ ನದಿಯಲ್ಲಿ ಸ್ನಾನ ಮಾಡಿರುವುದು ಹಾಗೂ ಸಾಲುಗಟ್ಟಿರುವುದು ಸೋಂಕು ಹೆಚ್ಚಾಗಲು ಕಾರಣ ಎಂದು ಹೇಳಲಾಗಿದೆ.
ಕಳೆದ 48 ಗಂಟೆಗಳಲ್ಲಿ ನದಿ ಪಕ್ಕದಲ್ಲಿರುವ ಹರಿದ್ವಾರ ನಗರದಲ್ಲಿ 1 ಸಾವಿರಕ್ಕೂ ಅಧಿಕ ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಬೃಹತ್ ಧಾರ್ಮಿಕ ಸಮಾರಂಭ, ಚುನಾವಣಾ ರ‍್ಯಾಲಿಗಳನ್ನು ನಡೆಸದಂತೆ ಹಾಗೂ ಹೆಚ್ಚು ಜನಸಂದಣಿ ಸೇರಬಾರದು ಎಂದು ತಜ್ಞರು ಈಗಾಗಲೇ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.