ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಿ ಭಾರಿ ಬಲಪ್ರದರ್ಶನ ನಡೆಸಿರುವುದು ಕಾಂಗ್ರೆಸ್ ಪಕ್ಷದಲ್ಲಿಯೂ ಸಂಚಲನ ಮೂಡಿಸಿದೆ. ಗುಜರಾತ್ ಕಾಂಗ್ರೆಸ್‌ನ ಸುಮಾರು 20 ಶಾಸಕರು ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿ ಪತ್ರ ಬರೆದಿದ್ದಾರೆ.ಮುಂಬರಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸುವ ಸಲುವಾಗಿ ಅವರು ಈ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಶಾಸಕರುರಾಹುಲ್ ಅವರಿಗೆ ಪತ್ರಬರೆದಿದ್ದಾರೆ ಎಂಬುದನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೊರ್ ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕರ ಬಣ ಈ ಪತ್ರ ಬರೆದಿದೆ. ನಾಯಕತ್ವದ ಬದಲಾವಣೆಗಾಗಿ ಈ ಬಣವು ಹಲವುದಿನಗಳಿಂದ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. 2017ರಿಂದ ಇಲ್ಲಿಯವರೆಗೆ ಗುಜರಾತ್‌ನಲ್ಲಿ ಕಾಂಗ್ರೆಸ್‌ನ ಸುಮಾರು 20 ಶಾಸಕರು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.