ADVERTISEMENT

ಜಮ್ಮು–ಕಾಶ್ಮೀರ: ಇಂದು ಕೊನೆಯ ಹಂತದ ಮತದಾನ

ಪಿಟಿಐ
Published 30 ಸೆಪ್ಟೆಂಬರ್ 2024, 23:30 IST
Last Updated 30 ಸೆಪ್ಟೆಂಬರ್ 2024, 23:30 IST
<div class="paragraphs"><p>ಮೂರನೇ ಹಂತದ ಮತದಾನಕ್ಕಾಗಿ ಚುನಾವಣಾ ಅಧಿಕಾರಿಗಳು ಮತಗಟ್ಟೆಯತ್ತ ತೆರಳಿದರು</p></div>

ಮೂರನೇ ಹಂತದ ಮತದಾನಕ್ಕಾಗಿ ಚುನಾವಣಾ ಅಧಿಕಾರಿಗಳು ಮತಗಟ್ಟೆಯತ್ತ ತೆರಳಿದರು

   

–ಪಿಟಿಐ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ 20,000 ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕೊನೆಯ ಹಂತದ ಚುನಾವಣೆಯು ಇಬ್ಬರು ಮಾಜಿ ಉಪ ಮುಖ್ಯಮಂತ್ರಿಗಳು ಸೇರಿ 415 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ. 

ನಿರ್ಣಾಯಕ ಹಂತವು 40 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, 5,060 ಮತಗಟ್ಟೆಗಳಲ್ಲಿ 39,18 ಲಕ್ಷ ಮತದಾರರಿದ್ದಾರೆ.

ಸಂವಿಧಾನದ 370ನೇ ವಿಧಿಯಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಪಾಕಿಸ್ತಾನದ ನಿರಾಶ್ರಿತರು, ವಾಲ್ಮೀಕಿ ಸಮಾಜ ಮತ್ತು ಗೋರ್ಖಾ  ಸಮುದಾಯವು ವಿಧಾನಸಭೆ, ನಗರ ಸಭೆ ಮತ್ತು ಗ್ರಾಮಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಮಾಡುವ ಹಕ್ಕು ಪಡೆದಿದೆ. ಹೀಗಾಗಿ ಈ ಚುನಾವಣೆಯು ಮಹತ್ವ ಪಡೆದಿದೆ.

ಚುನಾವಣೆ ನಡೆಯುವ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆನಂದ್ ಜೈನ್‌ ತಿಳಿಸಿದ್ದಾರೆ.

50 ಮತಗಟ್ಟೆಗಳನ್ನು ಮಹಿಳೆಯರು, 43 ಮತಗಟ್ಟೆಗಳನ್ನು ಅಂಗವಿಕಲರು ಮತ್ತು 40 ಮತಗಟ್ಟೆಗಳನ್ನು ಯುವಜನತೆ ನಿರ್ವಹಿಸಲಿದ್ದಾರೆ ಎಂದು ಜಮ್ಮು–ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಪಾಂಡುರಂಗ ಕೆ. ಪೋಲೆ ಅವರು ತಿಳಿಸಿದ್ದಾರೆ.

ಪ್ರಮುಖ ಅಂಶಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.