ADVERTISEMENT

ಸಿಕ್ಕಿಂನಲ್ಲಿ ಭಾರಿ ಮಳೆ, ಭೂಕುಸಿತ: 2,400 ಪ್ರವಾಸಿಗರ ರಕ್ಷಣೆ

ಪಿಟಿಐ
Published 18 ಜೂನ್ 2023, 2:54 IST
Last Updated 18 ಜೂನ್ 2023, 2:54 IST
   

ಗ್ಯಾಂಗ್ಟಕ್‌: ಸಿಕ್ಕಿಂನ ಉತ್ತರ ಭಾಗದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾದ ಪರಿಣಾಮ ಸಿಕ್ಕಿಹಾಕಿಕೊಂಡಿದ್ದ 2,413 ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿಢೀರ್ ಸುರಿದ ಮಳೆಯಿಂದಾಗಿ ಲಾಚೆನ್ ಮತ್ತು ಲಾಚುಂಗ್ ಪ್ರದೇಶದಲ್ಲಿ ಪ್ರವಾಸಿಗರು ಸಿಕ್ಕಿಹಾಕಿಕೊಂಡಿದ್ದರು.

ಪೆಗಾಂಗ್-ಚುಂಗ್‌ತಾಂಗ್‌ನಲ್ಲಿ ಭೂಕುಸಿತದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.

ADVERTISEMENT

ಜನರಲ್ ರಿಸರ್ವ್ ಎಂಜಿನಿಯರ್ ಫೋರ್ಸ್ (ಜಿಆರ್‌ಇಎಫ್), ಚುಂಗ್‌ತಾಂಗ್ ಉಪ ವಿಭಾಗೀಯ ಅಧಿಕಾರಿಗಳು ಮತ್ತು ಪಂಚಾಯತ್‌ನ ಸ್ಥಳೀಯ ಸದಸ್ಯರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 2,413 ಪ್ರವಾಸಿಗರನ್ನು ರಕ್ಷಿಸಲಾಗಿದೆ. ರಾಜ್ಯ ಸರ್ಕಾರದ ವಾಹನಗಳಲ್ಲಿ ಅವರನ್ನು ಸಿಕ್ಕಿಂ ರಾಜಧಾನಿ ಗ್ಯಾಂಗ್ಟಕ್‌ಗೆ ಕರೆತರಲಾಗಿದೆ. ಪ್ರವಾಸಿಗರಿಗೆ ಬೇಕಾದ ತುರ್ತು ವೈದ್ಯಕೀಯ ನೆರವನ್ನು ಒದಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.