ADVERTISEMENT

ಗಂಗಾಸಾಗರದಲ್ಲಿ ಪವಿತ್ರ ಸ್ನಾನ; 3 ಲಕ್ಷ ಯಾತ್ರಾರ್ಥಿಗಳಿಗೆ ಕೋವಿಡ್ ಪರೀಕ್ಷೆ

ಪಿಟಿಐ
Published 14 ಜನವರಿ 2022, 2:20 IST
Last Updated 14 ಜನವರಿ 2022, 2:20 IST
ಗಂಗಾಸಾಗರ ಮೇಳದಲ್ಲಿ ಪವಿತ್ರ ಸ್ನಾನ
ಗಂಗಾಸಾಗರ ಮೇಳದಲ್ಲಿ ಪವಿತ್ರ ಸ್ನಾನ   

ಕೋಲ್ಕತ್ತ: ಕೋವಿಡ್ ಮಾರ್ಗಸೂಚಿಯನ್ನು ಪಾಲಿಸುವ ನಿಟ್ಟಿನಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗಂಗಾ ಮತ್ತು ಬಂಗಾಳ ಕೊಲ್ಲಿಯ ಸಂಗಮದಲ್ಲಿ ನಡೆಯುತ್ತಿರುವ ಗಂಗಾಸಾಗರ ಮೇಳದಲ್ಲಿ ಪವಿತ್ರ ಸ್ನಾನ ಮಾಡಲು ತಲುಪಿದ ಮೂರು ಲಕ್ಷಕ್ಕೂ ಹೆಚ್ಚು ಮಂದಿ ಯಾತ್ರಾರ್ಥಿಗಳಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಈ ಪೈಕಿ ಶೇ 0.63 ಮಂದಿಯಲ್ಲಿ ಮಾತ್ರ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೀರ್ಥ ಯಾತ್ರೆಯ ಸಂದರ್ಭದಲ್ಲಿ ಗಂಗಾಸಾಗರದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾತ್ರಾರ್ಥಿಗಳಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಯಿತು.

ಕೋವಿಡ್ ಮಾರ್ಗಸೂಚಿ ಪಾಲನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಕಲ್ಕತ್ತ ಹೈಕೋರ್ಟ್ ದ್ವಿಸದಸ್ಯ ಸಮಿತಿ ರಚಿಸಿದೆ. ನಿವೃತ್ತ ನ್ಯಾಯಮೂರ್ತಿ ಸಮಾಪ್ತಿ ಚಟ್ಟೋಪಾಧ್ಯಾಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರನ್ನು ಒಳಗೊಂಡ ಸಮಿತಿಯು ಹೆಚ್ಚಿನ ಜನಸಂದಣಿಯನ್ನು ತಡೆಗಟ್ಟುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋಲ್ಕತ್ತದಿಂದ 100 ಕಿ.ಮೀ. ದೂರದಲ್ಲಿರುವ ಸಾಗರ ದ್ವೀಪಕ್ಕೆ ಹೋಗುವ ವಿವಿಧ ಮಾರ್ಗಗಳಲ್ಲಿ 3.2 ಲಕ್ಷ ಯಾತ್ರಾರ್ಥಿಗಳು ಕೋವಿಡ್ ಆರ್-ಪಿಸಿಆರ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಸಚಿವರಾದ ಅರೂಪ್ ಬಿಸ್ವಾಸ್ ಹಾಗೂ ಶಶಿ ಪಂಜ ಸ್ಥಳದಲ್ಲಿ ಮೊಕ್ಕಾಂ ಹೂಡಿ, ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ಜೊತೆಗೆ ಸಮನ್ವಯ ಸಾಧಿಸಿ ಪವಿತ್ರ ಸ್ನಾನ ಸುಗಮವಾಗಿ ಸಾಗುವಂತೆ ನೋಡಿಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.