ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ನಗರದ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಹೊಸ ವರ್ಷದ ದಿನದಂದು ಎಂಟು ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ದೇವಸ್ಥಾನ ತೆರೆದಾಗಿನಿಂದ ಮುಚ್ಚುವವರೆಗೆ 8.10 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಆಡಳಿತಾಧಿಕಾರಿ ಸಂದೀಪ್ ಸೋನಿ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 6 ಗಂಟೆಯಿಂದಲೇ ದೇವರ ದರ್ಶನಕ್ಕಾಗಿ ಉದ್ದನೆಯ ಸರತಿ ಸಾಲುಗಳು ಇದ್ದವು. ಮುಂಜಾನೆ ದೇವರಿಗೆ ನಡೆದ ಭಸ್ಮಾರತಿಯನ್ನು ಸುಮಾರು 45,000ಕ್ಕೂ ಹೆಚ್ಚು ಜನರು ವೀಕ್ಷಿಸಿದರು ಎಂದು ಮಾಹಿತಿ ನೀಡಿದ್ದಾರೆ.
ಮಹಾಕಾಳೇಶ್ವರ ದೇವಾಲಯವು ದೇಶದ ಹನ್ನೆರೆಡು ‘ಜ್ಯೋತಿರ್ಲಿಂಗ’ಗಳಲ್ಲಿ ಒಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.