ADVERTISEMENT

ಲೋಕಸಭಾ ಚುನಾವಣೆ | ಅತಿ ಆತ್ಮವಿಶ್ವಾಸದಿಂದ ಬಿಜೆಪಿಗೆ ಹಿನ್ನಡೆ: ಯೋಗಿ ಆದಿತ್ಯನಾಥ

ಪಿಟಿಐ
Published 14 ಜುಲೈ 2024, 15:25 IST
Last Updated 14 ಜುಲೈ 2024, 15:25 IST
ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ   

ಲಖನೌ: ‘ಅತಿ ಆತ್ಮವಿಶ್ವಾಸದಿಂದ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೆ ತಕ್ಕಂತೆ ಗೆಲುವು ಪಡೆಯಲು ಸಾಧ್ಯವಾಗಿಲ್ಲ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಹಿನ್ನಡೆಯಾದ ಬಳಿಕ ಭಾನುವಾರ ಇಲ್ಲಿ ನಡೆದ ರಾಜ್ಯ ಘಟಕದ ಮೊದಲ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಹಿಂದಿನ ಚುನಾವಣೆಯಲ್ಲಿ ಪಡೆದ ಮತಪ್ರಮಾಣವನ್ನು ಈ ಬಾರಿಯೂ ಬಿಜೆಪಿ ಉಳಿಸಿಕೊಂಡಿದೆ. ಚುನಾವಣೆಯಲ್ಲಿ ಮತಗಳ ಪಲ್ಲಟ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಪ್ರತಿಪಕ್ಷಗಳು ಸೋಲು ಕಾಣಲಿವೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ 2014, 2019ರ ಲೋಕಸಭಾ ಚುನಾವಣೆ, 2017, 2022ರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದ್ದೆವು.  ಅತಿ ಆತ್ಮವಿಶ್ವಾಸದಿಂದ ನಿರೀಕ್ಷೆಗೆ ತಕ್ಕಂತೆ ಸೀಟು ಗೆಲ್ಲಲು ಸಾಧ್ಯವಾಗಲಿಲ್ಲ’ ಎಂದರು.

ADVERTISEMENT

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 80 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 33 ಸೀಟುಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್‌ 6, ಸಮಾಜವಾದಿ ಪಕ್ಷವು 37 ಕ್ಷೇತ್ರದಲ್ಲಿ ಗೆಲುವು ಪಡೆದಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.