ಹೈದರಾಬಾದ್: ದೇಶದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಐಎಮ್ಐಎಮ್‌ನ ಅಧ್ಯಕ್ಷ, ಸಂಸದ ಅಸಾದುದ್ಧೀನ್ ಓವೈಸಿ ಟೀಕಿಸಿದ್ದಾರೆ.
ಜಮ್ಮು–ಕಾಶ್ಮೀರದ ದೋಡಾ ಜಿಲ್ಲೆಯ ದೇಸಾ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೇಜರ್ ಬ್ರಿಜೇಶ್ ಥಾಪಾ, ಒಬ್ಬ ಪೊಲೀಸ್ ಸೇರಿದಂತೆ ನಾಲ್ವರು ಸೇನೆಯ ಸಿಬ್ಬಂದಿ ಹುತಾತ್ಮರಾದ ಘಟನೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ನಿಯಂತ್ರಿಸುವಲ್ಲಿ ಎನ್‌ಡಿಎ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.
ಇದು ಮೋದಿ ಸರ್ಕಾರದ ಸಂಪೂರ್ಣ ವೈಫಲ್ಯ, ಅವರಿಗೆ ಭಯೋತ್ಪಾದನೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಓವೈಸಿ ಟೀಕಿಸಿದರು.
ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಭಯೋತ್ಪಾದನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಏನು? ಈಗ ನಡೆಯುತ್ತಿರುವುದು ಏನು ಎಂದು ಪ್ರಶ್ನೆ ಮಾಡಿದರು.
ದೋಡಾ ಪ್ರದೇಶವು ಗಡಿ ನಿಯಂತ್ರಣ ರೇಖೆಯಿಂದ ತುಂಬಾ ದೂರದಲ್ಲಿದೆ. ಆದರೂ ಉಗ್ರರು ಒಳನುಸುಳಿದ್ದು ಹೇಗೆ? ಎಂದು ಪ್ರಶ್ನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.