ಹೈದರಾಬಾದ್: ತ್ರಿವಳಿ ತಲಾಖ್, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ಮಧ್ಯಪ್ರದೇಶದ ಪಸ್ಮಂದ ಮುಸ್ಲಿಮರ (ಮುಸ್ಲಿಂನಲ್ಲಿ ಹಿಂದುಳಿದವರು) ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿರುವ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಒವೈಸಿ, ಪ್ರಧಾನಿ ಏಕೆ ಪಾಕಿಸ್ತಾನದಿಂದ ಪ್ರೇರಣೆ ಪಡೆಯುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಏಕರೂಪ ನಾಗರಿಕ ಸಂಹಿತೆಯ ಕುರಿತು ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಓವೈಸಿ, ಯುಸಿಸಿ ಹೆಸರಲ್ಲಿ ದೇಶದ ವಿವಿಧತೆ ಮತ್ತು ವೈವಿಧ್ಯತೆಯನ್ನು ಕಿತ್ತುಕೊಳ್ಳಲಾಗುತ್ತಿದೆಯೇ ಎಂದು ವಾಗ್ದಾಳಿ ಮಾಡಿದ್ದಾರೆ.
ಎನ್‌ಡಿಎ ಸರ್ಕಾರ ತ್ರಿವಳಿ ತಲಾಖ್ ರದ್ದುಗೊಳಿಸಿದ್ದರೂ ತಳಮಟ್ಟದಲ್ಲಿ ಯಾವುದೇ ಪರಿಣಾಮ ಬೀರಿಲ್ಲ ಎಂದು ಓವೈಸಿ ಹೇಳಿದರು.
ಪಾಕಿಸ್ತಾನವನ್ನು ಉಲ್ಲೇಖಿಸಿ ಪ್ರಧಾನಿ ಮೋದಿ, ಅಲ್ಲಿ ತ್ರಿವಳಿ ತಲಾಖ್ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ. ಮೋದಿ ಅವರು ಪಾಕಿಸ್ತಾನದ ಕಾನೂನಿನಿಂದ ಏಕೆ ಪ್ರೇರಣೆ ಪಡೆಯಬೇಕು? ತ್ರಿವಳಿ ತಲಾಖ್ ವಿರುದ್ಧ ಕಾನೂನು ಸಹ ರೂಪಿಸಿದರು. ಆದರೆ ತಳಮಟ್ಟದಲ್ಲಿ ಯಾವುದೇ ಪರಿಣಾಮ ಬೀರಿಲ್ಲ. ಬದಲಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.