ಗುವಾಹಟಿ: ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಮಣಿಪುರ ಚಿತ್ರನಿರ್ದೇಶಕ ಅರಿಬಮ್ ಶ್ಯಾಂ ಶರ್ಮಾ, ತಮಗೆ 2006ರಲ್ಲಿ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ಬಾಂಗ್ಲಾದೇಶ, ಅಫ್ಗಾನಿಸ್ತಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡುವ, ಪೌರತ್ವ (ತಿದ್ದುಪಡಿ) ಮಸೂದೆಗೆ ಶರ್ಮಾ ವಿರೋಧ ವ್ಯಕ್ತಪಡಿಸಿದ್ದಾರೆ.
ಮಣಿಪುರದ ನಾಗರಿಕ ಸಂಘಟನೆಗಳು ಮತ್ತು ಈಶಾನ್ಯ ರಾಜ್ಯಗಳು ಈ ಸಂಬಂಧ ಪ‍್ರತಿಭಟನೆ ನಡೆಸುತ್ತಿರುವ ಮಧ್ಯೆಯೇ, ಶರ್ಮಾ ಈ ನಿರ್ಧಾರ ಪ್ರಕಟಿಸಿದ್ದಾರೆ.
83 ವರ್ಷದ ಶರ್ಮಾ, ಮಣಿಪುರ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರು ನಿರ್ದೇಶಿಸಿದ ಹಲವು ಚಿತ್ರಗಳು ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿವೆ.
ಪ್ರಸ್ತುತ ಪೌರತ್ವ ಕಾಯ್ದೆ 1955ರ ಅನುಸಾರ, ಅಫ್ಗಾನಿಸ್ತಾನ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತ ಧರ್ಮೀಯ ವಲಸಿಗರು ಭಾರತದಲ್ಲಿ 12 ಅಥವಾ ಅದಕ್ಕಿಂತ ಹೆಚ್ಚು ವರ್ಷ ವಾಸವಿದ್ದಲ್ಲಿ ಮಾತ್ರ ಭಾರತೀಯ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ.ಆದರೆ ಈ ಕಾಯ್ದೆಗೆ ತಿದ್ದುಪಡಿ ಮಾಡಿ ರೂಪಿಸಲಾಗಿರುವ ಮಸೂದೆ ಅಡಿಯಲ್ಲಿ, ಇವರೆಲ್ಲಾಭಾರತದಲ್ಲಿ 6 ವರ್ಷ ವಾಸವಿದ್ದರೆ ಅವರು ಇಲ್ಲಿನಪೌರತ್ವ ಪಡೆಯಲು ಅರ್ಹರಾಗುತ್ತಾರೆ. ಯಾವುದೇ ಸೂಕ್ತ ದಾಖಲೆಗಳು ಇಲ್ಲದಿದ್ದರೂ ಅವರು ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.