ಲಾಹೋರ್: ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
ಪದಚ್ಯುತಿಗೊಂಡಿರುವ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರರಾಗಿರುವ ಶಹಬಾಜ್ ಅವರು, ಬಹುಕೋಟಿ ಆಶಿಯಾನ ಹೌಸಿಂಗ್ ಪ್ರಾಜೆಕ್ಟ್ ಮತ್ತು ಪಂಜಾಬ್ ಸಾಫ್ ಪಾನಿ ಕಂಪನಿ ಹಗರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾರೆ.
‘ಶಹಬಾಜ್ ಅವರು ಶುಕ್ರವಾರ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಹಗರಣದಲ್ಲಿ ತಾವು ಶಾಮೀಲಾಗಿಲ್ಲ ಎಂಬುದನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾದ ಕಾರಣ ಅವರನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.