ADVERTISEMENT

ಪಾಕ್ ಮಾಜಿ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಆಸ್ಪತ್ರೆಗೆ ದಾಖಲು

ಪಿಟಿಐ
Published 12 ಅಕ್ಟೋಬರ್ 2020, 11:37 IST
Last Updated 12 ಅಕ್ಟೋಬರ್ 2020, 11:37 IST
ಅಸಿಫ್ ಅಲಿ ಜರ್ದಾರಿ
ಅಸಿಫ್ ಅಲಿ ಜರ್ದಾರಿ   

ಇಸ್ಲಾಮಾಬಾದ್: ಅನಾರೋಗ್ಯದಿಂದ ಬಳಲುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಪಾಕಿಸ್ತಾನ ಪೀಪಲ್ಸ್ ಪಕ್ಷದ (ಪಿಪಿಪಿ) ಸಹ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರನ್ನು ಕರಾಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಭಾನುವಾರ ಸಂಜೆ ಅಸಿಫ್ ಅಲಿ ಅವರು ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅಗತ್ಯವಿರುವ ಪರೀಕ್ಷೆಗಳನ್ನು ಮಾಡುತ್ತಿದ್ದಾರೆ’ ಎಂದು ಪಾಕಿಸ್ತಾನ ಪೀಪಲ್ಸ್ ಪಕ್ಷವು ಭಾನುವಾರ ಟ್ವೀಟ್ ಮಾಡಿದೆ.

‘ಅಲಿ ಅವರ ದೇಹದಲ್ಲಿ ಸಕ್ಕರೆ ಮಟ್ಟ ಕುಸಿತಕಂಡಿತ್ತು. ಹಾಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಲಿ ಅವರ ದೀರ್ಘಕಾಲದ ಸಹವರ್ತಿ ಡಾ.ಅಸೀಮ್ ಹುಸೇನ್ ಖಾಸಗಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ’ ಎಂದು ಡಾನ್ ನ್ಯೂಸ್ ವರದಿ ಮಾಡಿದೆ.

ADVERTISEMENT

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳನ್ನು ಎದುರಿಸುತ್ತಿರುವ ಅಸಿಫ್ ಅಲಿ ಜರ್ದಾರಿ ಅವರು ಕಳೆದ ವರ್ಷ ಡಿಸೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಅವರ ಅನಾರೋಗ್ಯದ ಕಾರಣಕ್ಕಾಗಿ ಇಸ್ಲಾಮಾಬಾದ್ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಜರ್ದಾರಿ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.