ಇಸ್ಲಾಮಾಬಾದ್: ಕೋವಿಡ್–19ರ ಚಿಕಿತ್ಸೆ ಸಲುವಾಗಿ ಆಕ್ಸ್‌ಫರ್ಡ್– ಆಸ್ಟ್ರಾಜೆನಿಕಾ ಅಭಿವೃದ್ಧಿ ಪಡಿಸಿರುವ ಲಸಿಕೆ ಬಳಸಲು ಪಾಕಿಸ್ತಾನ ಅನುಮೋದನೆ ನೀಡಿದೆ. ವರ್ಷದ ಮೊದಲ ತ್ರೈಮಾಸಿಕದಲ್ಲಿಯೇ ಲಸಿಕೆ ಬಳಕೆಗೆ ಲಭ್ಯವಾಗಲಿದೆ ಎಂದು ಸರ್ಕಾರ ಆಶಿಸಿದೆ.
ಪ್ರಧಾನಿ ಇಮ್ರಾನ್ ಖಾನ್ ಅವರ ವಿಶೇಷ ಸಹಾಯಕ ಡಾ.ಫೈಸಲ್ ಸುಲ್ತಾನ್ ಅವರು ಈ ವಿಷಯವನ್ನು ಖಚಿತ ಪಡಿಸಿದ್ದು, ದೇಶದ ಔಷಧ ನಿಯಂತ್ರಣ ಪ್ರಾಧಿಕಾರವು ಲಸಿಕೆ ಬಳಕೆಗೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ನಿರ್ವಹಣಾ ಕೇಂದ್ರದ ಮುಖ್ಯಸ್ಥರೂ ಆದ ಯೋಜನಾ ಸಚಿವ ಅಸದ್ ಉಮರ್, ಮಾರ್ಚ್‌ಗೆ ಲಸಿಕೆ ಲಭ್ಯವಾಗಲಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, 65 ವರ್ಷ ಮೀರಿದ ನಾಗರಿಕರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.