ನವದೆಹಲಿ:ಅಯೋಧ್ಯೆ ತೀರ್ಪಿಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪಾಕಿಸ್ತಾನಿ ಉಗ್ರರು ಉತ್ತರ ಪ್ರದೇಶಕ್ಕೆ ನುಸುಳಿದ್ದಾರೆ ಎಂಬ ಆತಂಕಕಾರಿ ವಿಚಾರ ಬಹಿರಂಗವಾಗಿದೆ.
ನೇಪಾಳದ ಮೂಲಕ ಏಳು ಉಗ್ರರ ತಂಡ ಉತ್ತರ ಪ್ರದೇಶ ಪ್ರವೇಶಿಸಿದ ಸುಳಿವು ಲಭ್ಯವಾಗಿದೆ ಎಂದು ಗುಪ್ತಚರ ಇಲಾಖೆ ಮೂಲಗಳನ್ನು ಉಲ್ಲೇಖಿಸಿಇಂಡಿಯಾ ಟುಡೆವರದಿ ಮಾಡಿದೆ.
ಪ್ರಸ್ತುತ ಉಗ್ರರು ಅಯೋಧ್ಯೆ, ಫೈಜಾಬಾದ್ ಮತ್ತು ಗೋರಖ್‌ಪುರದಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಅಯೋಧ್ಯೆ ವಿವಾದ: ತೀರ್ಪು ಏನೇ ಬಂದರೂ ಶಾಂತಿ ಕಾಪಾಡಿ
ಏಳು ಉಗ್ರರ ಪೈಕಿ ಐವರನ್ನು ಮೊಹಮ್ಮದ್ ಯಾಕುಬ್, ಅಬು ಹಂಜಾ, ಮೊಹಮ್ಮದ್ ಶಾಬಾಜ್, ನಿಸಾರ್ ಅಹ್ಮದ್ ಮತ್ತು ಮೊಹಮ್ಮದ್ ಖ್ವಾಮಿ ಚೌಧರಿ ಎಂದು ಗುರುತಿಸಲಾಗಿದೆ. ಉಗ್ರರ ದಾಳಿ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಸುಳಿವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಗುಪ್ತಚರ ಮೂಲಗಳು ತಿಳಿಸಿವೆ ಎಂದು ವರದಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.