ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಟ್ವೀಟ್ ಮಾಡಿದರೆಂದು ಬೇಟಿ ಬಚಾವೋ, ಬೇಟಿ ಪಢಾವೋ ಆಂದೋಲನ ರಾಯಭಾರಕ್ಕೆ ಪರಿಣೀತಿ ಚೋಪ್ರಾ ಅವರನ್ನು ಕೈಬಿಟ್ಟಿದ್ದಾರೆ ಎಂಬುದು ಸುಳ್ಳು ಎಂದು ಹರಿಯಾಣ ಸರ್ಕಾರ ಹೇಳಿದೆ.
ಆಂದೋಲನದ ರಾಯಭಾರಿಯಾಗಿ ಅವರನ್ನು ಆಯ್ಕೆ ಮಾಡುವಾಗಲೇ ಏಪ್ರಿಲ್ 2017ರವರೆಗೆ ಮಾತ್ರ ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು. ತಂದನಂತರ ಅವರನ್ನು ಮುಂದುವರಿಸಲಿಲ್ಲ ಎಂದು ಹರಿಯಾಣ ಸರ್ಕಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.