ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷಗಳ 12 ಸದಸ್ಯರಅಮಾನತನ್ನು ಖಂಡಿಸಿಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಗುರುವಾರವೂ ಪ್ರತಿಭಟನೆ ನಡೆಸಿವೆ.
ಇದೇ ವೇಳೆ ಅಮಾನತುಗೊಂಡಿರುವ ರಾಜ್ಯಸಭಾ ಸದಸ್ಯರುಕ್ಷಮೆಯಾಚಿಸಬೇಕು ಎಂದು ಕೇಂದ್ರ ಸರ್ಕಾರವು ಒತ್ತಾಯಿಸಿದೆ.
‘12 ಸದಸ್ಯರಅಮಾನತಿಗೆ ಸಂಬಂಧಿಸಿದ ವಿಚಾರದಲ್ಲಿ ಪ್ರತಿಪಕ್ಷಗಳ ನಾಯಕರು ಸದನದ ಘನತೆಯನ್ನು ಕುಗ್ಗಿಸಿರುವುದು ವಿಷಾದನೀಯ‘ ಎಂದು ರಾಜ್ಯಸಭೆಯ ಸಭಾನಾಯಕ ಪಿಯೂಷ್ ಗೋಯಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಾನತುಗೊಂಡಿರುವ ಸದಸ್ಯರುಸದನದ ಕ್ಷಮೆಯಾಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇದೇ ವಿಚಾರವಾಗಿ ಪ್ರತಿಪಕ್ಷಗಳು ಮೇಲ್ಮನೆಯಲ್ಲಿಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.