ನವದೆಹಲಿ:ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಎಸ್‌ಪಿಜಿ (ವಿಶೇಷ ರಕ್ಷಣಾ ಪಡೆ) ಭದ್ರತೆಯನ್ನು ವಾಪಸ್ ಪಡೆದ ವಿಚಾರ ರಾಜ್ಯಸಭೆಯಲ್ಲಿ ಬುಧವಾರವೂ ಚರ್ಚೆಯಾಯಿತು.
ಈ ವಿಚಾರವಾಗಿ ಕೇಂದ್ರ ಸರ್ಕಾರದ ಪರ ಸ್ಪಷ್ಟನೆ ನೀಡಿದ ಬಿಜೆಪಿ ನಾಯಕ ಜೆ.ಪಿ.ನಡ್ಡಾ, ‘ಮನಮೋಹನ್ ಸಿಂಗ್ ಮತ್ತು ಗಾಂಧಿ ಕುಟುಂಬದವರಿಗೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆದಿರುವುದು ರಾಜಕೀಯ ನಿರ್ಧಾರ ಅಲ್ಲ. ಗಣ್ಯ ವ್ಯಕ್ತಿಗಳಿಗೆ ಇರುವ ಬೆದರಿಕೆ ಆಧಾರದಲ್ಲಿ ಭದ್ರತೆ ಒದಗಿಸುವುದು ಮತ್ತು ಹಿಂಪಡೆಯಲಾಗುತ್ತದೆ. ಈ ನಿರ್ಧಾರವನ್ನು ರಾಜಕಾರಣಿಗಳು ತೆಗೆದುಕೊಳ್ಳುವುದಿಲ್ಲ. ಗೃಹ ಇಲಾಖೆ ತೀರ್ಮಾನ ಕೈಗೊಳ್ಳುತ್ತದೆ’ ಎಂದು ಹೇಳಿದರು.
ಎಸ್‌ಪಿಜಿ ಭದ್ರತೆ ಹಿಂಪಡೆದ ವಿಚಾರ ಮಂಗಳವಾರ ಸಂಸತ್‌ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಸದಸ್ಯರು ಮಂಗಳವಾರ ಲೋಕಸಭೆಯಲ್ಲಿತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ:ಎಸ್‌ಪಿಜಿ ವಾಪಸ್: ಲೋಕಸಭೆಯಲ್ಲಿ ಗದ್ದಲ
ಬುಧವಾರ ಬೆಳಿಗ್ಗೆ ಸೋನಿಯಾ ಗಾಂಧಿ ಸಂಸದರ ಸಭೆ ನಡೆಸಿ ಸಂಸತ್‌ನಲ್ಲಿ ಚರ್ಚೆ ನಡೆಸಬೇಕಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಆರ್ಥಿಕ ಹಿಂಜರಿತ, ರೈತರ ಸಮಸ್ಯೆಗಳು, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಬಗ್ಗೆ ಚರ್ಚಸಿಲು ತೀರ್ಮಾನಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.