ADVERTISEMENT

ಹೊಸ ಮಸೂದೆಗಳ ಪರಿಶೀಲನೆಗೆ ಸಂಸದೀಯ ಸಮಿತಿ ಸಭೆ

ಪಿಟಿಐ
Published 24 ಆಗಸ್ಟ್ 2023, 8:31 IST
Last Updated 24 ಆಗಸ್ಟ್ 2023, 8:31 IST
ಪಿಟಿಐ ಚಿತ್ರ
   ಪಿಟಿಐ ಚಿತ್ರ

ನವದೆಹಲಿ: ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ದಂಡ ಸಂಹಿತೆ (ಸಿಆರ್‌ಪಿಸಿ) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ಜಾರಿಗೊಳಿಸಲು ಉದ್ದೇಶಿಸಿರುವ ಹೊಸ ಮಸೂದೆಗಳ ಪರಿಶೀಲನೆಗೆ ಸಂಸದೀಯ ಸಮಿತಿ ಸಭೆ ನಡೆಯಲಿದೆ.

ಗೃಹ ಇಲಾಖೆ ಕಾರ್ಯದರ್ಶಿ ಅಜಯ್‌ ಭಲ್ಲಾ ಅವರು ಸಮಿತಿ ಸದಸ್ಯರ ಎದುರು ಹೊಸ ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತೆ ಮಸೂದೆ–2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ–2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ–2023 ಕುರಿತು ವಿಷಯ ಮಂಡಿಸಲಿದ್ದಾರೆ.

ಬಿಜೆಪಿಯ ಬ್ರಿಜ್‌ ಲಾಲ್‌ ಅವರು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದು, ಸ್ಥಾಯಿ ಸಮಿತಿಯು ಮೂರು ತಿಂಗಳಲ್ಲಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು.

ADVERTISEMENT

ಲೋಕಸಭೆಯ ಅಧಿವೇಶನದಲ್ಲಿ ಹೊಸ ಮಸೂದೆಗಳನ್ನು ಮಂಡಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸದ್ಯ ಇರುವ ಕಾನೂನುಗಳನ್ನು ಬ್ರಿಟಿಷರ ಆಡಳಿತವನ್ನು ಗಟ್ಟಿಗೊಳಿಸುವುದಕ್ಕಾಗಿ ರಚಿಸಲಾಗಿತ್ತು. ಆ ಕಾನೂನುಗಳನ್ನು ಈಗ ತೆಗೆದು ಹಾಕಲಾಗುತ್ತಿದೆ. ನೂತನ ಮಸೂದೆಗಳು ಜಾರಿಗೆ ಬಂದರೆ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆಯಾಗಲಿದೆ. ಈಗಿನ ಅಗತ್ಯಗಳಿಗೆ ಅನುಗುಣವಾಗಿ ಈ ಕಾನೂನುಗಳಿಗೆ ಬದಲಾವಣೆ ತರಲಾಗಿದೆ. ಎಲ್ಲರಿಗೂ ತ್ವರಿತವಾಗಿ ನ್ಯಾಯ ಒದಗಿಸಲು ಅನುವು ಮಾಡಿಕೊಡಲಾಗಿದೆ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.