ADVERTISEMENT

ಸಂಸತ್‌ ಚಳಿಗಾಲದ ಅಧಿವೇಶನ ನ. 25ರಿಂದ: ಸಚಿವ ಕಿರಣ್‌ ರಿಜಿಜು

ಪಿಟಿಐ
Published 5 ನವೆಂಬರ್ 2024, 10:34 IST
Last Updated 5 ನವೆಂಬರ್ 2024, 10:34 IST
<div class="paragraphs"><p>ಸಂಸತ್ ಭವನ</p></div>

ಸಂಸತ್ ಭವನ

   

ನವದೆಹಲಿ: 2024ನೇ ಸಾಲಿನ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್‌ 25 ರಿಂದ ಡಿಸೆಂಬರ್‌ 20ರವರೆಗೆ ನಡೆಯಲಿದೆ ಎಂದು  ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಸಂಸತ್ತಿನ ಕೆಳಮನೆ ಮತ್ತು ಮೇಲ್ಮನೆಯ ಅಧಿವೇಶವನ್ನು ನ. 25ರಿಂದ ಡಿ.20ರವರೆಗೆ ನಡೆಸಲಾಗುವುದು. ನ.26 ರಂದು ಸಂವಿಧಾನ ದಿನವಾಗಿದೆ. ಭಾರತ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಈ ಸಂದರ್ಭದಲ್ಲಿ ಸಂವಿಧಾನ ಸದನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.