ADVERTISEMENT

ಇಂಡಿಗೊ ವಿಮಾನದ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕನ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜುಲೈ 2022, 7:37 IST
Last Updated 24 ಜುಲೈ 2022, 7:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಪ್ರಯಾಣದ ಸಂದರ್ಭದಲ್ಲಿಇಂಡಿಗೊ ಏರ್‌ಲೈನ್ಸ್‌ ವಿಮಾನದ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಈ ಬಗ್ಗೆ'ಲೈವ್‌ಹಿಂದೂಸ್ತಾನ್‌'ವರದಿ ಮಾಡಿದ್ದು, ಶ್ರೀನಗರ ಮತ್ತು ಲಖನೌ ನಡುವೆ ಸಂಚರಿಸುತ್ತಿದ್ದ6E6075 ವಿಮಾನದಲ್ಲಿ ಈ ಪ್ರಕರಣ ವರದಿಯಾಗಿದೆ. ಅಮೃತಸರ ಮಾರ್ಗವಾಗಿ ಸಂಚರಿಸುವ ಈ ವಿಮಾನವು ಶ್ರೀನಗರದಿಂದ ಹಾರಾಟ ಆರಂಭಿಸಿದ ಬಳಿಕ, ಪ್ರಯಾಣಿಕ ಗಗನಸಖಿಯೊಂದಿಗೆ ವಾಗ್ವಾದ ನಡೆಸಿ, ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿಸಿದೆ.

ಬಳಿಕ ಈ ವಿಚಾರವನ್ನು ಅಮೃತಸರ ವಿಮಾನ ನಿಲ್ದಾಣದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅದರಂತೆ ವಿಮಾನವು ಅಮೃತಸರ ನಿಲ್ದಾಣಕ್ಕೆ ಆಗಮಿಸುವ ಮುನ್ನ ಭದ್ರತಾ ಸಿಬ್ಬಂದಿಯನ್ನು ರನ್‌ವೇ ಬಳಿ ನಿಯೋಜಿಸಲಾಗಿತ್ತು. ನಂತರ ಪ್ರಯಾಣಿಕನನ್ನು ಬಂಧಿಸಿ, ಪೊಲೀಸರ ವಶಕ್ಕೆ ಕಳುಹಿಸಲಾಗಿದೆ ಎಂದೂ ಉಲ್ಲೇಖಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.