ನವದೆಹಲಿ: ದಿಬ್ರುಗಢ ಮತ್ತು ದೆಹಲಿ ನಡುವೆ ಸಂಚರಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಅಗ್ನಿಶಾಮಕ ಪರಿಕರವನ್ನು ಬಳಸಿ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ.
ದೆಹಲಿಗೆ ಬರುತ್ತಿದ್ದ 6ಇ 2037 ವಿಮಾನದಲ್ಲಿ ಈ ಘಟನೆ ನಡೆದಿದ್ದು, ಯಾರಿಗೂ ತೊಂದರೆಯಾಗಿಲ್ಲ. ಗುರುವಾರ ಮಧ್ಯಾಹ್ನ ಸುಮಾರು 12.45ಕ್ಕೆ ವಿಮಾನವು ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಡಿಜಿಸಿಎ ಹೇಳಿಕೆ ತಿಳಿಸಿದೆ.
'ದಿಬ್ರುಗಢನಿಂದ ದೆಹಲಿಗೆ ಹೊರಟಿದ್ದ ವಿಮಾನ 6ಇ 2037ರಲ್ಲಿ ಮೊಬೈಲ್ ಒಂದರಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅಪಾಯಕರ ಪರಿಸ್ಥಿತಿ ಎದುರಿಸುವ ಬಗ್ಗೆ ತರಬೇತಿ ಪಡೆದಿದ್ದ ವಿಮಾನ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಯಾವುದೇ ಪ್ರಯಾಣಿಕರಿಗೆ, ವಸ್ತುಗಳಿಗೆ ಅಥವಾ ವಿಮಾನದ ಪರಿಕರಗಳಿಗೆ ಹಾನಿಯಾಗಿಲ್ಲ' ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.