ನವದೆಹಲಿ: ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿ ಮಾಡುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು(ಡಿಜಿಸಿಎ) ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿದೆ.
ಕೋವಿಡ್ ಮಾರ್ಗಸೂಚಿ ಪಾಲನೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ದೇಶದಾದ್ಯಂತ ವಿಮಾನಗಳಲ್ಲಿ ರ್‍ಯಾಂಡಮ್ ತಪಾಸಣೆ ನಡೆಸಲಾಗುವುದು ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರು ಪ್ರಯಾಣದುದ್ದಕ್ಕೂ ಸೂಕ್ತವಾಗಿ ಮಾಸ್ಕ್ ಧರಿಸಿದ್ಧಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಶುಚಿತ್ವಕ್ಕೆ ಒತ್ತು ನೀಡಬೇಕು ಎಂದು ಅದು ತಿಳಿಸಿದೆ.
‘ಒಂದೊಮ್ಮೆ ಪ್ರಯಾಣಿಕರು ನಿಯಮಗಳನ್ನು ಪಾಲಿಸದಿದ್ದರೆ ಅಂತಹ ಪ್ರಯಾಣಿಕರ ವಿರುದ್ಧ ವೈಮಾನಿಕ ಸಂಸ್ಥೆಯು ಕಠಿಣ ಕ್ರಮ ಕೈಗೊಳ್ಳಲಿದೆ’ಎಂದು ಅದು ಹೇಳಿದೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚಚಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನದ ಒಳಗೆ ಕೋವಿಡ್ ಶಿಷ್ಟಾಚಾರದ ಕಠಿಣ ಪಾಲನೆಗೆ ವಿಮಾನಯಾನ ಸಂಸ್ಥೆಗಳಿಗೆ ಾಗಸ್ಟ್ 16ರಂದು ಸೂಚಿಸಲಾಗಿದೆ ಎಂದು ಅದು ಹೇಳಿದೆ.
ದೇಶದಲ್ಲಿ ಬುಧವಾರ ಹೊಸದಾಗಿ 9,062 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗಿನ ಸೋಂಕಿತರ ಒಟ್ಟು ಸಂಖ್ಯೆ 4,42,86,256ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,05,058 ರಷ್ಟಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.