ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಪಟ್ನಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಸಚಿವ ರವಿಶಂಕರ್ ಪ್ರಸಾದ್ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವರು.
ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಪಟ್ನಾಗೆ ಒಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 74 ವರ್ಷದ ಪಾಸ್ವಾನ್ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದರು.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.