ADVERTISEMENT

ವೈದ್ಯರ ಮುಷ್ಕರ: ದೆಹಲಿ, ಹೈದರಾಬಾದ್‌ನಲ್ಲೂ ಚಿಕಿತ್ಸೆ ಇಲ್ಲದೇ ರೋಗಿಗಳ ಪರದಾಟ

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 5:04 IST
Last Updated 14 ಜೂನ್ 2019, 5:04 IST
   

ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಮುಷ್ಕರ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಬೆಂಬಲ ಸೂಚಿಸಿ, ಮಹಾರಾಷ್ಟ್ರ, ದೆಹಲಿ, ಹೈದರಾಬಾದ್‌ನ ಏಮ್ಸ್‌ ಆಸ್ಪತ್ರೆ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ಚಿಕಿತ್ಸೆ ಇಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ.

ಭದ್ರತೆಗೆ ಸಂಬಂಧಿಸಿದ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸಲಾಗುವುದು ಎಂದು ಕಿರಿಯ ವೈದ್ಯರು ಪಟ್ಟು ಹಿಡಿದು ಮುಷ್ಕರವನ್ನು ಮುಂದುವರೆಸಿದ್ದಾರೆ. ಈ ವೈದ್ಯರಿಗೆ ಬೆಂಬಲ ಸೂಚಿಸಿ ದೆಹಲಿ, ಹೈದರಾಬಾದಿನ ಏಮ್ಸ್‌ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಕಿರಿಯ ವೈದ್ಯರು ಮುಷ್ಕರ ನಡೆಸುತ್ತಿರುವುದರಿಂದ ರೋಗಿಗಳು ಚಿಕಿತ್ಸೆ ಇಲ್ಲದೆ ಪರದಾಡುತ್ತಿದ್ದಾರೆ.

ಕೋಲ್ಕತ್ತದ ಎನ್‌ಆರ್‌ಎಸ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವಿಗೀಡಾದ ರೋಗಿಯೊಬ್ಬರ ಸಂಬಂಧಿಕರು ನಡೆಸಿದ ಹಲ್ಲೆ ಯಲ್ಲಿಇಬ್ಬರು ವೈದ್ಯರು ತೀವ್ರ ಗಾಯಗೊಂಡಿದ್ದರು. ಈ ಘಟನೆ ಬಳಿಕ, ಮಂಗಳವಾರದಿಂದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ಮುಷ್ಕರ:ಪಶ್ಚಿಮ ಬಂಗಾಳದ ಕಿರಿಯ ವೈದ್ಯರ ಮುಷ್ಕರವನ್ನು ಬೆಂಬಲಿಸಿ ಮಹಾರಾಷ್ಟ್ರದಲ್ಲೂ ಕಿರಿಯ ವೈದ್ಯರು ಮುಷ್ಕರ ಆರಂಭಿಸಿದ್ದಾರೆ. ಒಪಿಡಿಯನ್ನು ಬಂದ್‌ ಮಾಡುವ ಮೂಲಕ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆ ಇಲ್ಲದೇ ಪರದಾಡುವಂತಾಗಿದೆ.

ಎಲ್ಲ ಮುಖ್ಯಮಂತ್ರಿಗಳ ಜತೆ ಚರ್ಚೆ:ವೈದ್ಯರಿಗೆ ಭದ್ರತೆ ಒದಗಿಸುವ ಸಂಬಂಧಿಸಿದ ವಿಷಯವನ್ನು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ತಿಳಿಸಿದ್ದಾರೆ.

ವೈದ್ಯರಿಗೆ ಸುರಕ್ಷಿತವಾದ ವಾತಾವರಣ ಕಲ್ಪಿಸುವುದು ಅಗತ್ಯ. ವೈದ್ಯರು ಸಮಾಜದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.