ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (ಆರ್ಐಎಲ್) ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬರು ಶುಕ್ರವಾರ ಇ–ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.