ADVERTISEMENT

ಗೃಹಬಂಧನದಲ್ಲಿ ಮೆಹಬೂಬಾ ಮುಫ್ತಿ: ಪಿಡಿಪಿ ಹೇಳಿಕೆ

ಪಿಟಿಐ
Published 1 ನವೆಂಬರ್ 2021, 12:57 IST
Last Updated 1 ನವೆಂಬರ್ 2021, 12:57 IST
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ   

ಶ್ರೀನಗರ: ‘ಕಳೆದ ವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯುವಕನ ಕುಟುಂಬವನ್ನು ಭೇಟಿ ಮಾಡಲು ಅನಂತನಾಗ್‌ಗೆ ತೆರಳವುದನ್ನು ತಡೆಯಲು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಸೋಮವಾರ ಗೃಹಬಂಧನದಲ್ಲಿ ಇರಿಸಲಾಗಿದೆ’ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

‘ಮೆಹಬೂಬಾ ಅವರ ಮನೆಯ ಮುಖ್ಯಗೇಟ್‌ಗೆ ಪೊಲೀಸರು ಬೀಗ ಹಾಕಿದ್ದಾರೆ. ಮೆಹಬೂಬಾ ಅವರನ್ನು ನಗರದ ಗುಪ್ಕರ್ ಪ್ರದೇಶದಲ್ಲಿನ ಅವರ ‘ಫೇರ್‌ವ್ಯೂ’ ನಿವಾಸದಲ್ಲಿ ಗೃಹಬಂಧನದಲ್ಲಿ ಇರಿಸಲಾಗಿ‌ದ್ದು, ಹೊರಗೆ ಹೋಗಲು ಅವಕಾಶ ನೀಡಲಿಲ್ಲ’ ಎಂದು ಅವರು ದೂರಿದ್ದಾರೆ.

‘ಅ. 24ರಂದು ಶೋಪಿಯಾನ್ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಶಾಹಿದ್ ಅಹ್ಮದ್ ಹತನಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.