ಶ್ರೀನಗರ: ಗೃಹ ಬಂಧನದಲ್ಲಿದ್ದ ಪಿಡಿಪಿ ನಾಯಕ ನಯೀಮ್ ಅಖ್ತರ್ ಅವರನ್ನು ಒಂದು ತಿಂಗಳ ಬಳಿಕ ಭಾನುವಾರ ಬಿಡುಗಡೆ ಮಾಡಲಾಗಿದೆ.
ಮೇ 10ರಂದು ಅಖ್ತರ್ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಮುಖ್ಯವಾಹಿನಿಯ ರಾಜಕೀಯ ಪಕ್ಷಗಳಿಗೆ ಕೇಂದ್ರ ಮಾತುಕತೆಗೆ ಆಹ್ವಾನಿಸಿದ ಬೆನ್ನಲ್ಲೇ ಅಖ್ತರ್ ಅವರನ್ನು ಬಿಡುಗಡೆಗೊಳಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಅಖ್ತರ್ ಅವರನ್ನು 2019ರ ಆಗಸ್ಟ್‌ನಲ್ಲಿಯೂ ವಶಕ್ಕೆ ತೆಗೆದು
ಕೊಂಡು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ಬಳಿಕ, 2020ರ ಜೂನ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡು ಐದು ತಿಂಗಳ ನಂತರ ಬಿಡುಗಡೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.