ADVERTISEMENT

‘ಇಂಡಿಯಾ’ ಕೂಟಕ್ಕೆ ಬೆಂಬಲ: ಮೆಹಬೂಬಾ

​ಪ್ರಜಾವಾಣಿ ವಾರ್ತೆ
Published 21 ಮೇ 2024, 16:15 IST
Last Updated 21 ಮೇ 2024, 16:15 IST
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ   

ರಜೌರಿ/ ಜಮ್ಮು (ಪಿಟಿಐ): ಸೈದ್ಧಾಂತಿಕವಾಗಿ ನಮ್ಮ ಪಕ್ಷವು ‘ಇಂಡಿಯಾ’ ಕೂಟವನ್ನು ಬೆಂಬಲಿಸುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಕಾಶ್ಮೀರದಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ಪಕ್ಷವು ‘ಇಂಡಿಯಾ’ ಕೂಟದ ಜತೆಗಿದೆ. ಮೈತ್ರಿ ಸೂತ್ರದಂತೆ ಎನ್‌ಸಿ ಪ‍ಕ್ಷವು ಶ್ರೀನಗರ, ಬಾರಾಮುಲ್ಲಾ ಮತ್ತು ಅನಂತನಾಗ್–ರಜೌರಿ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಪಿಡಿಪಿಗೆ ಯಾವುದೇ ಕ್ಷೇತ್ರ ಬಿಟ್ಟುಕೊಟ್ಟಿರಲಿಲ್ಲ. ಇದರಿಂದ ಮುಫ್ತಿ ಅವರು ಮೂರೂ ಕ್ಷೇತ್ರಗಳಲ್ಲಿ ಎನ್‌ಸಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ಆದರೆ ಜಮ್ಮು ವಲಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು.

‘ಬಿಜೆಪಿಯ ಸಂವಿಧಾನವನ್ನು ಬದಲಿಸಲು ಮತ್ತು ಮೀಸಲಾತಿ ರದ್ದುಗೊಳಿಸಲು ಪ್ರಯತ್ನಿಸುತ್ತಿದೆ. ರಾಹುಲ್‌ ಗಾಂಧಿ ಅವರು ಸಂವಿಧಾನ ರಕ್ಷಣೆಗಾಗಿ ಹೋರಾಡುತ್ತಿದ್ದಾರೆ. ಆದ್ದರಿಂದ ನಾವು ಸೈದ್ಧಾಂತಿಕವಾಗಿ ಅವರ ಜತೆ ಇದ್ದೇವೆ’ ಎಂದು ಮುಫ್ತಿ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.