ಶ್ರೀನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಯಾವುದೇ ಪಕ್ಷವು ಬಹುಮತ ಪಡೆಯುವುದಿಲ್ಲ ಎಂದು ಪಿಡಿಪಿ ಮುಖ್ಯಸ್ಥೆ ಇಲ್ತಿಜಾ ಮುಫ್ತಿ ಭವಿಷ್ಯ ನುಡಿದಿದ್ದಾರೆ.
ಈ ಕಾರಣ ಪಿಡಿಪಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ಕಿಂಗ್ ಮೇಕರ್ ಆಗಲಿದೆ ಎಂದು ಅವರು ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು.
ರಾಜ್ಯದಲ್ಲಿ ನಾವು ಕಿಂಗ್ ಮೇಕರ್ ಆಗಲಿದ್ದೇವೆ ಎಂಬ ವಿಶ್ವಾಸ ನಮಗಿದೆ. ಇಲ್ಲಿ ಯಾವದೇ ಪಕ್ಷ ಸ್ಪಷ್ಟ ಬಹುಮತ ಪಡೆಯುವುದಿಲ್ಲ ಎಂದು ಹೇಳಿದರು.
ಇಲ್ತಿಜಾ ಅವರು ಮುಫ್ತಿ ಕುಟುಂಬದ ಮೂರನೇ ತಲೆಮಾರಿನ ರಾಜಕಾರಣಿಯಾಗಿದ್ದಾರೆ. ಇವರು ಗುಫ್ವಾರಾ ವಿಧಾನಸಭಾ ಕ್ಷೇತ್ರದಿಂದ ಪಿಡಿಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಹಿಂದೆ ಇಲ್ತಿಜಾ ಅವರ ತಾಯಿ ಮೆಹಬೂಬಾ ಮುಫ್ತಿ ಮತ್ತು ಅವರ ಅಜ್ಜ ಮುಫ್ತಿ ಮೊಹಮ್ಮದ್ ಸಯೀದ್ ಇದೇ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಬಿಜೆಪಿಗೆ ಜಮ್ಮು ಮತ್ತು ಕಾಶ್ಮೀರದ ನೆಲವನ್ನು ಬಿಟ್ಟುಕೊಡದಂತೆ ತಮ್ಮ ಪಕ್ಷವು ಹೋರಾಡಲಿದೆ ಎಂದು ಇಲ್ತಿಜಾ ಹೇಳಿದರು.
2019ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ರದ್ದು ಮಾಡಿದ ಬಳಿಕ ಮೆಹಬೂಬ ಮುಪ್ತಿಯನ್ನು ಬಂಧನದಲ್ಲಿ ಇಡಲಾಯಿತು. ಈ ವೇಳೆ ಇಲ್ತಿಜಾ ರಾಜಕೀಯಕ್ಕೆ ಧುಮುಕಿದರು. ಇದು ಅವರ ಮೊದಲ ಚುನಾವಣಾ ಕಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.